Home Uncategorized MP ಎಲೆಕ್ಷನ್ ದೃಷ್ಟಿಯಿಂದ ಜೆಡಿಎಸ್ ಜತೆ ಮೈತ್ರಿ – ಸಿಪಿ ಯೋಗೇಶ್ವರ್

MP ಎಲೆಕ್ಷನ್ ದೃಷ್ಟಿಯಿಂದ ಜೆಡಿಎಸ್ ಜತೆ ಮೈತ್ರಿ – ಸಿಪಿ ಯೋಗೇಶ್ವರ್

8
0

ರಾಮನಗರ;- MP ಎಲೆಕ್ಷನ್ ದೃಷ್ಟಿಯಿಂದ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮೈತ್ರಿ ವಿಚಾರವಾಗಿ ಜಿಲ್ಲೆ ಬಹಳ ವಿರೋಧ ಇದ್ದ ಕ್ಷೇತ್ರ. ನಾವು, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನೇರಾ ನೇರವಾಗಿ ಪರಸ್ಪರ ವಿರೋಧವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೆವು. ಹೊಂದಾಣಿಕೆ ಎನ್ನುವುದು ತಾಳ್ಮೆಯಿಂದ ಪರಸ್ಪರ ಒಂದಾಗಿ ಎಲ್ಲರ ಮನಸ್ಸನ್ನು ಒಗ್ಗೂಡಿಸುವುದು ಎಂದು ಹೇಳಿದ್ದಾರೆ.

ಇಂದು ಪಕ್ಷದ ಕಾರ್ಯಕರ್ತರ, ಮುಖಂಡರ ಸಭೆ ಕರೆಯಲಾಗಿದೆ. ಸಭೆಯಲ್ಲಿ ನಮ್ಮ ರಾಷ್ಟೀಯ ನಾಯಕರು ತೆಗೆದುಕೊಂಡಿರುವ ನಿರ್ಧಾರವನ್ನು ತಿಳಿಸಲಾಗುವುದು. ಮೈತ್ರಿಯ ಅನಿವಾರ್ಯತೆ ಏನೆಂಬುದು ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ. ಬೂತ್ ಮಟ್ಟದಲ್ಲಿ ಎರಡು ಪಕ್ಷದವರನ್ನು ಒಗ್ಗೂಡಿಸಿ ಒಂದಾಗಿ ಕೆಲಸ ಮಾಡಬೇಕಾಗಿದೆ ಎಂದರು.

ಮೈತ್ರಿ ನಂತರ ಹೆವ್​ಡಿ ಕುಮಾರಸ್ವಾಮಿ ಭೇಟಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಮೈತ್ರಿ ನಂತರ ವೈಯಕ್ತಿಕವಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ. ಒಂದು ಸಲ ಪೋನ್​ನಲ್ಲಿ ಮಾತಾಡಿದ್ದೇನೆ ಎಂದು ತಿಳಿಸಿದ್ದಾರೆ.

The post MP ಎಲೆಕ್ಷನ್ ದೃಷ್ಟಿಯಿಂದ ಜೆಡಿಎಸ್ ಜತೆ ಮೈತ್ರಿ – ಸಿಪಿ ಯೋಗೇಶ್ವರ್ appeared first on Ain Live News.

LEAVE A REPLY

Please enter your comment!
Please enter your name here