
MP Pratap Simha lacks political maturity: Chief Minister Siddaramaiah
ಬೆಂಗಳೂರು:
ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಪ್ರಶ್ನಿಸಿದ ಮುಖ್ಯ ಮಂತ್ರಿಗಳು ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ.
ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.