MP Sanganna Kardi| ಬಿಜೆಪಿ ಪಕ್ಷಕ್ಕೆ ರಾಜಿನಾಮೆ ನೀಡಿದ ಸಂಸದ ಸಂಗಣ್ಣ ಕರಡಿ
ಬೆಂಗಳೂರು : ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನದ ಜೊತೆಗೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನೀಡಿದ್ದಾರೆ.
ಇಂದು ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ ಮೇಲ್ ಮೂಲಕ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
