ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಅವರು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು.
ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.