ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 31ಕ್ಕೆ (ಶನಿವಾರ) ವಿಚಾರಣೆ ಮುಂದೂಡಿ ಆದೇಶಿಸಿದೆ.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಶನಿವಾರ ಬೆಳಗ್ಗೆ 10:30 ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಆ ಮೂಲಕ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ.