Home ರಾಜಕೀಯ ಮುಡಾ ಪ್ರಕರಣ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬುಲೆಟ್‌ ಪ್ರೂಫ್‌ ಕಾರು, ಝೆಡ್...

ಮುಡಾ ಪ್ರಕರಣ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬುಲೆಟ್‌ ಪ್ರೂಫ್‌ ಕಾರು, ಝೆಡ್ ಶ್ರೇಣಿಯ ಭದ್ರತೆ

45
0
Oplus_0

ಬೆಂಗಳೂರು:  ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾಗಿದ್ದಾರೆ.

ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಝೆಡ್ ಶ್ರೇಣಿಯ ಭದ್ರತೆಯನ್ನು ಪೊಲೀಸರು ಒದಗಿಸಿರುವುದಲ್ಲದೆ, ಆಗಸ್ಟ್ 29ರ ವರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇನ್ನೂ, ಎಚ್ಚರಿಕೆ ನಡೆ ಅನುಸರಿಸಿರುವ ರಾಜ್ಯಪಾಲರು ಬುಧವಾರ ನಡೆದ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

LEAVE A REPLY

Please enter your comment!
Please enter your name here