ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.
ಈ ಹಿಂದೆ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ರಾಜ್ಯಪಾಲರ ಆದೇಶ ಎತ್ತಿಹಿಡಿದಿತ್ತು. ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿ ಸರಿಯಿದೆ ಎಂದು ಸಿಎಂ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು. ಹಾಗಾಗಿ ಈಗ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಬರಬೇಕಿದೆ.