
Karnataka Chief Minister Siddaramaiah
ಮೈಸೂರು:
ಮುಡಾಕ್ಕೆ (Mysore Urban Development Authority) ಸಂಬಂಧಿಸಿದಂತೆ ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆಡಿಪಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದು, ಮುಂಗಾರು ವಿಳಂಬವಾಗಿರುವುದರಿಂದ ಕುಡಿಯುವ ನೀರು, ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಲಿ ಸೂಚಿಸಲಾಗಿದೆ ಎಂದರು.
ಮಂಗಳೂರು, ಉಡುಪಿ, ರಾಯಚೂರು, ಕೊಪ್ಪಳಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಬಾರದು ಎಂದು ತಿಳಿಸಲಾಗಿದೆ. ಮೈಸೂರಿನಲ್ಲಿ ನೀರಿನ ತೊಂದರೆಯಾದರೆ ಸೂಕ್ತ ಯೋಜನೆ ತಯಾರು ಮಾಡಬೇಕು ಎಂದು ಸೂಚಿಸಿದೆ. ಜನರೊಂದಿಗೆ ಸೌಜನ್ಯ ದಿಂದ ವರ್ತಿಸಬೇಕು. ಹಿರಿಯ ಅಧಿಕಾರಿಗಳು ಕೆಳಗಿನ ಕಚೇರಿಗಳಿಗೆ ಆಗಾಗ್ಗೆ ಭೇಟಿ ನೀಡಿ, ಕ್ಷೇತ್ರ ಭೇಟಿಯನ್ನೂ ಮಾಡಲು ಸೂಚಿಸಿದೆ ಎಂದರು.
ಮತ್ತೊಮ್ಮೆ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಕೆಡಿಪಿ ಸಭೆ ನಡೆಸಲಿದ್ದಾರೆ ಎಂದರು.
ದಸರಾ ಪ್ರಾಧಿಕಾರ ರಚನೆಗೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. ತಕ್ಷಣವೇ ಸಮಿತಿ ಸಭೆ ಕರೆಯಲಾಗುವುದು ಎಂದರು.
ಕಾವೇರಿ ನೀರು ತಮಿಳುನಾಡಿಗೆ ನೀಡಲು ನಮ್ಮ ಬಳಿ ನೀರಿಲ್ಲ. ಕೊಡಬಾರದು ಎಂದೇನಿಲ್ಲ. ಆದರೆ ನಮಗೇ ಕೊರತೆಯಾಗಿದೆ ಎಂದರು.