ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ ಎನ್ ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ.
— CM of Karnataka (@CMofKarnataka) July 14, 2024
ಪ್ರಕರಣದ… pic.twitter.com/UmiUQ8V8wZ
ತನಿಖೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ವಿಚಾರಣೆಯನ್ನು ಪೂರ್ಣ ಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚಿಸಲಾಗಿದೆ.