ಬೆಂಗಳೂರು:
ರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಿ.ಎಂ. ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಏಕೈಕ ಸ್ಥಾನದ ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಪರಿಷತ್ತಿನ ಉಪ ಸಭಾಪತಿಯಾಗಿದ್ದ ಜೆಡಿಎಸ್ ನ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು.