Home ಬೆಂಗಳೂರು ನಗರ ‘ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ’ – ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ...

‘ಮುಸಲ್ಮಾನ ಗೂಂಡಾಗಳು ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ’ – ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

125
0
Muslim goons assassinated Hindu activist, alleges Karnataka Minister KS Eshwarappa

ಬೆಂಗಳೂರು/ಶಿವಮೊಗ್ಗ:

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ​ಈಶ್ವರಪ್ಪ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಯುವಕನ ಹತ್ಯೆ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ

Also Read: Tension at Shivamogga after Hindu youth murdered

LEAVE A REPLY

Please enter your comment!
Please enter your name here