Home Uncategorized Mysore Bangalore Highway: ಬೆಂಗಳೂರು ಮೈಸೂರು ದಶಪಥ ರಸ್ತೆಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಡಲು ಪ್ರತಾಪ್...

Mysore Bangalore Highway: ಬೆಂಗಳೂರು ಮೈಸೂರು ದಶಪಥ ರಸ್ತೆಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಡಲು ಪ್ರತಾಪ್ ಸಿಂಹ​, ನಿತಿನ್​ ಗಡ್ಕರಿಗೆ ಮನವಿ

15
0

ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ (Bengaluru-Myosre Expressway) ಕಾವೇರಿ (Kaveri river) ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರು-ಮೈಸೂರು 10 ಲೇನ್​​ ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರಿಡುವಂತೆ ಪ್ರತಾಪ್​ ಸಿಂಹ ಪತ್ರ ಬರೆದಿದ್ದಾರೆ.

10ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ-ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ “ಕಾವೇರಿ ಎಕ್ಸ್​​ಪ್ರೆಸ್ ವೇ” ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶದ “ಯಮುನಾ ಎಕ್ಸ್ ಪ್ರೆಸ್ ವೇ”, “ಗಂಗಾ ಎಕ್ಸ್ ಪ್ರೆಸ್ ವೇ”, ಮಧ್ಯಪ್ರದೇಶದ “ನರ್ಮದಾ ಎಕ್ಸ್ ಪ್ರೆಸ್ ವೇ” ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ “ಕಾವೇರಿ ಎಕ್ಸ್ ಪ್ರೆಸ್ ವೇ” ಎಂದು ಹೆಸರಿಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿಕೊಂಡರು. pic.twitter.com/RwqcFFuerS

— Pratap Simha (@mepratap) December 21, 2022

ದಶಪಥ ಹೆದ್ದಾರಿಯಿಂದಾಗಿ ಮೈಸೂರು – ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here