ಅಕ್ಟೋಬರ್ 15ರಂದು ಚಲನಚಿತ್ರೋತ್ಸವ ಉದ್ಘಾಟನೆಯಾಗಲಿದ್ದು, ಮೈಸೂರಿನ ಕಲಾಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ.
ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ 100ನೇ ಜನ್ಮದಿನದ ನೆನಪಿನಲ್ಲಿ ಚಲನಚಿತ್ರೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರ ಮಗಳು ಸುಧಾ ನರಸಿಂಹರಾಜು ಅವರನ್ನ ಗೌರವಿಸಲಾಗುತ್ತಿದೆ. ಚಲನಚಿತ್ರೋತ್ಸವದಲ್ಲಿ ಕನ್ನಡ ಸೇರಿದಂತೆ ವಿಶ್ವದ ಅತ್ಯುತ್ತಮ ಚಿತ್ರಗಳ ಪ್ರದರ್ಶನಗೊಳ್ಳಲಿದ್ದು, ಒಟ್ಟು 112 ಚಿತ್ರಗಳು ಪ್ರದರ್ಶನಗೊಳ್ಳಲಿದೆ. ಅಕ್ಟೋಬರ್ 16ರಿಂದ ಚಲನಚಿತ್ರ ಪ್ರದರ್ಶನ ನಡೆಯಲಿದೆ.
MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ
ಸಿನಿಪ್ರಿಯರಿಗೆ ಆನ್ ಲೈನ್ ಮೂಲಕ ಪಾಸ್ ವಿತರಣೆ ಮಾಡಲಾಗುತ್ತೆ. ಸಾರ್ವಜನಿಕರಿಗೆ 500 ರೂ, ವಿದ್ಯಾರ್ಥಿಗಳಿಗೆ 300 ರೂ ನಿಗದಿ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ ಒಟ್ಟು ಏಳು ದಿನಗಳ ಕಾಲ ನಡೆಯಲಿದೆ. ಮೈಸೂರಿನ INOX ಹಾಗೂ DRC ಥಿಯೇಟರ್ ನಲ್ಲಿ ಪ್ರದರ್ಶನ. ಈ ಬಾರಿಯ ದಸರಾ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ದಸರಾ ಉದ್ಘಾಟಕರು ಹಾಗೂ ಸಂಗೀತ ನಿರ್ದೇಶಕರಾದ ಹಂಸಲೇಖ, ನಟ ನಟಿಯರಾದ ಡಾರ್ಲಿಂಗ್ ಕೃಷ್ಣ ದಂಪತಿಗಳು,
ಮಾನ್ವಿತಾ, ಮಯೂರಿ, ವೈಭವಿ ಭಾಗಿಯಾಗಲಿದ್ದಾರೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶನ ಸಾಧುಕೋಕಿಲ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ದಸರಾ ಚಲಚಿತ್ರ ಉಪಸಮಿತಿ ವಿಶೇಷ ಅಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಮಾಹಿತಿ ನೀಡಿದರು.
The post Mysore Dasara: ಈ ಬಾರಿಯ ದಸರಾದಲ್ಲಿ ಚಲನಚಿತ್ರೋತ್ಸವಕ್ಕೆ ವಿಶೇಷ ಮೆರಗು appeared first on Ain Live News.
