
ಬೆಂಗಳೂರು:
ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಮಳೆಯ ಅಭಾವದಿಂದ ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮೈಸೂರು ದಸರಾ ಹಬ್ಬವನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಹದೇವಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಮೈಸೂರು ನಗರಕ್ಕೆ ಎಲ್ಲೆಡೆಯಿಂದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಪ್ರತಿ ವರ್ಷ ನವರಾತ್ರಿ ಹಬ್ಬವನ್ನು ಅತ್ಯಂತ ವೈಭವ ಮತ್ತು ಆಡಂಬರದಿಂದ ಆಚರಿಸಲಾಗುತ್ತದೆ.
ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾವನ್ನು ಆಚರಿಸಲು ನಿರ್ಧರಿಸಿದೆ pic.twitter.com/zegs5Hk9er
— Dr H.C.Mahadevappa (@CMahadevappa) September 21, 2023