ನವದೆಹಲಿ:
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೆಯಾಗಿರಲಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸ್ಪಷ್ಟ ಆದೇಶ ನೀಡಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಹತೆ ಮಾತನಾಡಿದ್ಧೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
"I just don't agree with the comments made by my Home Minister regarding the gang-rape incident. I have advised him to give clarification," the #chiefminister said.#Mysore #Mysuru #GangRape #Bangalore #Bengaluru #Karnataka @CMofKarnataka @BSBommai @JnanendraAraga @DgpKarnataka pic.twitter.com/bqt5YIrliH
— Thebengalurulive/ಬೆಂಗಳೂರು ಲೈವ್ (@bengalurulive_) August 26, 2021
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆಂದು ತಿಳಿಸಿದರು.