
Mysore: head-on collision between Private bus- Innova car, 10 dead
ಮೈಸೂರು:
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.