Home ಮೈಸೂರು Mysore Mayor: ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸುನಂದಾ ಪಾಲನೇತ್ರಾ ಮೇಯರ್ ಆಗಿ...

Mysore Mayor: ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸುನಂದಾ ಪಾಲನೇತ್ರಾ ಮೇಯರ್ ಆಗಿ ಆಯ್ಕೆ

142
0
Mysore Mayor: BJP's Sunanda Palanetra elected as mayor for first time in Mysore's history

ಮೈಸೂರು:

ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಗದ್ದುಗೆ ಸಿಕ್ಕಿದೆ. ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಸುನಂದಾ ಪಾಲನೇತ್ರಾ ಅವರು ಜೆಡಿಎಸ್ನ ಪರೋಕ್ಷ ಬೆಂಬಲ ಪಡೆದು ಗೆಲುವು ಸಾಧಿಸಿದ್ದಾರೆ.

38 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಮೊದಲ ಬಾರಿಗೆ ಮೇಯರ್ ಗದ್ದುಗೆ ಹಿಡಿದಿದೆ. ಬಿಜೆಪಿಯ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರು ಮೈಸೂರಿನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್ ಪಕ್ಷ ಅಂತಿಮವಾಗಿ ಬಿಜೆಪಿಕ್ಕೆ ಬೆಂಬಲ ಕೊಟ್ಟಿದೆ. ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ತಟಸ್ಥರಾಗಿ ಉಳಿದಿದ್ದು ಬಿಜೆಪಿ ಗೆಲುವಿಗೆ ದಾರಿಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರಿಗೆ 26 ಮತ್ತು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಅವರಿಗೆ 23 ಮತಗಳು ಬಂದವು.

LEAVE A REPLY

Please enter your comment!
Please enter your name here