Home ಮೈಸೂರು ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ | ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120...

ನಾಳೆಯಿಂದ ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ | ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ, ಮಕ್ಕಳಿಗೆ 70 ರೂಪಾಯಿ ನಿಗದಿ

14
0
ಚಿತ್ರ ಮೂಲ: https://www.mysorepalace.gov.in/

ಮೈಸೂರು: ಜಿಎಸ್​​ಟಿ ಸೇರಿಸಿ ಮೈಸೂರು ಅರಮನೆ ಪ್ರವೇಶ ಟಿಕೆಟ್​ ದರ ಹೆಚ್ಚಳ ಮಾಡಲಾಗಿದೆ. ವಿದೇಶಿ ಪ್ರವಾಸಿಗರು, ಭಾರತೀಯ ವಯಸ್ಕರಿಗೆ, ಮಕ್ಕಳಿಗೆ ಮತ್ತು ಪ್ರವಾಸ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಹೆಚ್ಚಿಸಲಾಗಿದೆ.

ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಹಿಂದೆ ವಿದೇಶಿಯರಿಗೆ 100 ರೂ. ಪ್ರವೇಶ ಶುಲ್ಕವಿತ್ತು. ಈಗ ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ 900 ರೂ. ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ವಿದೇಶಿ ಪ್ರವಾಸಿಗರಿಗೆ ಪ್ರವೇಶ ದರ ಒಟ್ಟು 1,000 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ ನಿಗದಿಪಡಿಸಲಾಗಿದೆ.

10ರಿಂದ 18 ವರ್ಷದೊಳಗಿನ ಮಕ್ಕಳಿಗೆ 70 ರೂಪಾಯಿ ಪ್ರವೇಶ ಶುಲ್ಕ ಫಿಕ್ಸ್ ಮಾಡಿದ್ದರೆ, ಶೈಕ್ಷಣಿಕ ಪ್ರವಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ತಲಾ 50 ರೂ. ನಿಗದಿಪಡಿಸಿದೆ. ಇನ್ನು ಅರಮನೆ ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದ್ದು, ಉಚಿತ ಸೇವೆ ನೀಡಲು ಅರಮನೆ ಮಂಡಳಿ ತೀರ್ಮಾನ ಕೈಗೊಂಡಿದೆ.

 

LEAVE A REPLY

Please enter your comment!
Please enter your name here