Home ಚಾಮರಾಜನಗರ ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿಲ್ಲ: ಮೈಸೂರು ಜಿಲ್ಲಾಡಳಿತ

ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿಲ್ಲ: ಮೈಸೂರು ಜಿಲ್ಲಾಡಳಿತ

60
0

ಮೈಸೂರು:

ಚಾಮರಾಜನಗರಕ್ಕೆ ನಿನ್ನೆ ರಾತ್ರಿ 12.30 ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು‌ 250 ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದ್ದು, ಯಾವುದೇ ವಿಳಂಬವಾಗಿಲ್ಲ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ‌.

ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದನ್ನು ಸರಿಯಾದ ಸಮಯದಲ್ಲಿ ಬಂದಿದೆಯೋ, ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದ ಜಿಲ್ಲಾಡಳಿತದ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ಭಾನುವಾರ ಮಧ್ಯರಾತ್ರಿಯೆ ರವಾನೆ ಆಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಗಳಲ್ಲಿ 23 ಕೊರೋನಾ ರೋಗಿಗಳು ಸಾವು? https://kannada.thebengalurulive.com/covid-19-oxygen-shortage-claims-23-lives-in-chamarajanagar/

LEAVE A REPLY

Please enter your comment!
Please enter your name here