ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ.
ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭಂಗೀಶ್ ಅವರು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಭೃಂಗೀಶ್ ಅವರು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಇದೀಗ ಭೃಂಗೀಶ್ ಅವರನ್ನು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಲಾಗಿದೆ.