ಕಲಬುರ್ಗಿ;- ಸಿದ್ದರಾಮಯ್ಯ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ವಾಗ್ದಾಳಿ ನಡೆಸಿದರು.
ಈ ಸಂಬಂಧ ಮಾತನಾಡಿದ ಅವರು,ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅಲ್ಲ, ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ರಾಜ್ಯಕ್ಕೆ ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ಆಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕೋಲಿ ಸಮಾಜದ ಯುವಕನ ಹತ್ಯೆ ಆರೋಪಿಗೆ ಪ್ರಿಯಾಂಕ್ ಖರ್ಗೆ ರಕ್ಷಣೆ ನೀಡುತ್ತಿದ್ದಾರೆ.
ಆರೋಪಿಯನ್ನು ಅರೆಸ್ಟ್ ಮಾಡುವಂತೆ ಸ್ವತಃ ಸಿಎಂ ಹೇಳಿದರೆ ಅರೆಸ್ಟ್ ಆಗಲ್ಲ, ಸೂಪರ್ ಸಿಎಂ ಹೇಳಿದ್ರೆ ಅರೆಸ್ಟ್ ಆಗುತ್ತೆ. ಕಲಬುರಗಿ ಜಿಲ್ಲೆಯಲ್ಲಿ ಸೂಪರ್ ಸಿಎಂ ಏನು ಹೇಳ್ತಾರೋ ಅದೇ ನಡೆಯೋದು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ಕಾರಿದರು.
ರಾಜ್ಯದಲ್ಲಿ ಯಾವ ಶಾಸಕರ ಬೇಡಿಕೆಗಳು ಸಹ ಈಡೇರುತ್ತಿಲ್ಲ. ಏನು ಹೇಳಿದರೂ ಕೆಲಸ ಆಗುವುದಿಲ್ಲ. ಇದು ನಾನು ಹೇಳುತ್ತಿಲ್ಲ ಅವರ ಪಕ್ಷದವರೇ ಹೇಳುತ್ತಿದ್ದಾರೆ. ಪ್ರಿಯಾಂಕ ಖರ್ಗೆ ಬಾಳ ದೊಡ್ಡ ತತ್ವಜ್ಞಾನಿಯಂತೆ ಮಾತಾಡ್ತಾರೆ. ಅವರಂಥ ರಕ್ಷಣಾ ತಜ್ಞ, ಕೃಷಿ ಪಂಡಿತ, ಶಿಕ್ಷಣ ತಜ್ಞ ಈ ರಾಜ್ಯದಲ್ಲಿ ಮತ್ತೊಬ್ಬರಿಲ್ಲ ಎಂದು ವ್ಯಂಗ್ಯ ಮಾಡಿದರು.
The post N Ravikumar; ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅಲ್ಲ, ಪ್ರಿಯಾಂಕ ಖರ್ಗೆ – ಎನ್ ರವಿಕುಮಾರ್ ವ್ಯಂಗ್ಯ appeared first on Ain Live News.