ಬೆಂಗಳೂರು;-ಇಸ್ರೇಲ್ನಲ್ಲಿ ಸಿಲುಕಿರುವ ಮಂಗಳೂರಿಗರನ್ನ ನಮ್ಮ ಸರ್ಕಾರ ಸುರಕ್ಷಿತವಾಗಿ ಕರೆತರುತ್ತೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇಸ್ರೇಲ್ ನಲ್ಲಿ ಐದು ಸಾವಿರ ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಇಸ್ರೇಲ್ನಲ್ಲಿ ಐದು ಸಾವಿರ ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ. ಈ ಬಗ್ಗೆ ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿ ಕೊಳ್ಳಲು ಸೂಚಿಸಿದ್ದೇನೆ. ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಆರಂಕ ಇರುತ್ತದೆ. ಈಗಲೂ ಇಸ್ರೇಲ್ ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ. ರಷ್ಯಾ-ಉಕ್ರೇನ್ ಯುದ್ದ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು. ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ಮಾಡಿತ್ತು. ಈಗಲೂ ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿದ್ದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ, ಎಂದರು.
The post Nalin Kateel; ಇಸ್ರೇಲ್ನಲ್ಲಿ ಸಿಲುಕಿರುವ ದಕ್ಷಿಣ ಕನ್ನಡ ಜಿಲ್ಲೆಯವರನ್ನು ಸುರಕ್ಷಿತವಾಗಿ ಕರೆತರಲಾಗುತ್ತೆ – ಕಟೀಲ್ appeared first on Ain Live News.
