ಮಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ರಿಯಾಲಿಟಿ ಶೋ ಬಿಗ್ ಬಾಸ್ ಮನೆಗೆ ಪ್ರವೇಶಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮಾಜಿ ಸಚಿವ ಡಾ ಕೆ ಸುಧಾಕರ್ ಬಳಿಕ ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಹ ಕಾಂಗ್ರೆಸ್ ಕಾಲೆಳೆದಿದ್ದಾರೆ. ವಿಧಾನಸೌಧವನ್ನೇ ಬಿಗ್ ಬಾಸ್ ಮನೆಯನ್ನಾಗಿಸಿರುವ ಕಾಂಗ್ರೆಸ್ ಇದೀಗ ತನ್ನ ಶಾಸಕನನ್ನೇ ಬಿಗ್ ಬಾಸ್ ಮನೆಗೆ ಕಳುಹಿಸಿಕೊಟ್ಟಿದೆ ಎಂದು ಕಾಲೆಳೆದಿದ್ದಾರೆ.
Home remedies: ಚಳಿಗಾಲದಲ್ಲಿ ಕಿವಿ ನೋವು ನಿವಾರಿಸಲು ಇಲ್ಲಿದೆ ಮನೆಮದ್ದು!
ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಹೋಗಿರುವುದನ್ನು ಟೀಕಿಸಿ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. “ವಿಧಾನಸೌಧವನ್ನೇ ಬಿಗ್ ಬಾಸ್ ಮನೆಯನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ತನ್ನ ಶಾಸಕನನ್ನು ಈಗ ಬಿಗ್‌ಬಾಸ್ ಮನೆಗೆ ಕಳುಹಿಸಿಕೊಟ್ಟಿದೆ. ರಾಜ್ಯದಲ್ಲಿ ಬರ ಇದೆ, ಬೆಲೆಯೇರಿಕೆಯಿಂದ ಜನ ತತ್ತರಿಸಿದ್ದಾರೆ, ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನದಿಂದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆದರೆ ಕಾಂಗ್ರೆಸ್ಸಿಗೆ ಮಾತ್ರ ಇದಾವುದರ ಯೋಚನೆಯೇ ಇದ್ದಂತಿಲ್ಲ!” ಎಂದಿದ್ದಾರೆ.
The post Nalin Kumar Kateel: ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನದಿಂದ ಆರ್ಥಿಕ ಸ್ಥಿತಿ ಹದಗೆಟ್ಟಿದೆ: ನಳಿನ್ ಕುಮಾರ್ ಕಟೀಲ್ appeared first on Ain Live News.