Nalin Kumar Kateel campaigns in Hunsur assembly constituency
ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮೈಸೂರು ವಿಭಾಗದ ಪ್ರವಾಸದಲ್ಲಿ ಇಂದು ಮೈಸೂರು ಗ್ರಾಮಾಂತರದ ಹುಣಸೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಕೆರೆ ಗ್ರಾಮದಲ್ಲಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದರು. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಯನ್ನು ಗಮನಿಸಿ ಬಿಜೆಪಿಯನ್ನೇ ಬೆಂಬಲಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರೊಂದಿಗೆ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಳ ಸೋಮಶೇಖರ್, ಹುಣಸೂರು ವಿಧಾನಸಭಾ ಬಿಜೆಪಿ ಅಭ್ಯರ್ಥಿ ಡಿ.ಸೋಮಶೇಖರ್, ಹುಣಸೂರು ಮಂಡಲ ಅಧ್ಯಕ್ಷ ನಾಗಣ್ಣಗೌಡ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
