Home ಬೆಂಗಳೂರು ನಗರ ಕೇಶವ ಹೆಗಡೆ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

ಕೇಶವ ಹೆಗಡೆ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

28
0
Nalinkumar Kateel condoles demise of Keshav Hegde
Nalinkumar Kateel condoles demise of Keshav Hegde
Advertisement
bengaluru

ಬೆಂಗಳೂರು:

ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಕೇಶವ ಹೆಗಡೆ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಉತ್ತರ ಕನ್ನಡ ಮೂಲದವರಾದ ಹೆಗಡೆಯವರು ಅತ್ಯಂತ ಸರಳ ಪ್ರವೃತ್ತಿಯವರಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಪ್ರಚಾರಕರಾಗಿ ದೀರ್ಘಕಾಲ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕಾರ್ಯ ನಿರ್ವಹಿಸಿರುತ್ತಾರೆ. ಸಾವಿರಾರು ಕಾರ್ಯಕರ್ತರಿಗೆ ಪ್ರೇರಕ ಶಕ್ತಿಯಂತೆ ಅವರು ಕೆಲಸ ಮಾಡುತ್ತಿದ್ದರು.

ವಿಶ್ವ ಹಿಂದೂ ಪರಿಷತ್‍ನಡಿ ಪೂರ್ಣಕಾಲಿಕರಾಗಿ ಕರ್ತವ್ಯ ನಿರ್ವಹಿಸಿದವರು. ಅವರ ಅಕಾಲಿಕ ನಿಧನ ಸಮಾಜಕ್ಕಾದ ದೊಡ್ಡ ನಷ್ಟ ಎಂದು ತಿಳಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here