Namma Metro: Metro passengers can purchase 6 tickets through QR code
ಬೆಂಗಳೂರು:
ಪ್ರಯಾಣಿಕರು ಕ್ಯೂಆರ್ ಕೋಡ್ ಮೂಲಕ ಹೆಚ್ಚಿನ ಟಿಕೆಟ್ ಖರೀದಿಗೆ ನಮ್ಮ ಮೆಟ್ರೋ ಅವಕಾಶ ಕಲ್ಪಿಸಿದೆ. ನವೆಂಬರ್ 16ರಿಂದ ಏಕಕಾಲಕ್ಕೆ 6 ಕ್ಯೂಆರ್ ಕೋಡ್ ಟಿಕೇಟ್ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ.
ನಮ್ಮ ಮೆಟ್ರೋ ಆಯಪ್, ವಾಟ್ಸಾಪ್, ಪೇಟಿಎಂ, ಯಾತ್ರಾ ಆಯಪ್ ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಪ್ರಸ್ತುತ ಒಂದು ಟಿಕೆಟ್ ಖರೀದಿಗೆ ಮಾತ್ರ ಅವಕಾಶ ಇತ್ತು. ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಅಪ್ಡೇಟ್ ಮಾಡಲಾಗಿದೆ.
ಪ್ರಯಾಣಿಕರು ಪ್ರವೇಶ ಮತ್ತು ನಿರ್ಗಮನದ ಸಂದರ್ಭದಲ್ಲಿ ಎಫ್.ಸಿ. ಗೇಟ್ ಬಳಿ ಆರು ಜನ ಪ್ರಯಾಣಿಕರಿಗೆ ಒಂದೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಇದರಿಂದಾಗಿ ಟಿಕೆಟ್ ಕೌಂಟರ್ ನಲ್ಲಿ ಸರತಿ ಸಾಲು ನಿಯಂತ್ರಿಸಲು ತಪ್ಪುತ್ತದೆ. ಇನ್ನೂ ಕ್ಯೂಆರ್ ಕೋಡ್ ಟಿಕೆಟ್ ಮೇಲೆ ಶೇ. 5 ರಷ್ಟು ರಿಯಾಯಿತಿ ನೀಡಿದೆ.
