Home ಬೆಂಗಳೂರು ನಗರ ನಂದಿನಿ ಹಾಲ: ಆಗಸ್ಟ್ 1 ರಿಂದ ಲೀಟರ್ ಗೆ 3 ರೂ ಹೆಚ್ಚಳ

ನಂದಿನಿ ಹಾಲ: ಆಗಸ್ಟ್ 1 ರಿಂದ ಲೀಟರ್ ಗೆ 3 ರೂ ಹೆಚ್ಚಳ

37
0
Nandini Milk: Increase by Rs 3 per liter from August 1
Nandini Milk: Increase by Rs 3 per liter from August 1

ಬೆಂಗಳೂರು:

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು.

ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here