ನವದೆಹಲಿ: ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಿ ನೆಹರು ದಾಖಲೆಯನ್ನು ಸರಿಗಟ್ಟಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಸತತ 3 ಅವಧಿಗೆ ಪ್ರಧಾನಿಯಾದ ಎರಡನೇ ವ್ಯಕ್ತಿಯಾಗಿದ್ದಾರೆ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು 1952, 1957 ಮತ್ತು 1962ರ ಲೋಕಸಭೆ ಚುನಾವಣೆಗಳಲ್ಲಿ ಗೆದ್ದಿದ್ದರು.
2024ರ ತೀವ್ರ ಪೈಪೋಟಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ಡಿಎ ಒಕ್ಕೂಟದ ಗೆಲುವಿನ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ದ್ರೌಪದಿ ಮುರ್ಮು ಇಂದು ಸಂಜೆ ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. 73 ವರ್ಷದ ನರೇಂದ್ರ ಮೋದಿ ಮೊದಲು 2014ರಲ್ಲಿ ಪ್ರಧಾನಿಯಾಗಿದ್ದರು ಮತ್ತು ನಂತರ 2019ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದರು.
Shri @narendramodi has taken oath as the Prime Minister of India. pic.twitter.com/BJcwUnTLt1
— PMO India (@PMOIndia) June 9, 2024
ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ಪ್ರಮುಖ ನಾಯಕರಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೆ ಮತ್ತು ವೈಸ್ -ಸೆಶೆಲ್ಸ್ ಅಧ್ಯಕ್ಷ ಅಹ್ಮದ್ ಅಫೀಫ್- ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿದ್ದರು.