ಬೆಂಗಳೂರು:
ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ “ರಾಷ್ಟ್ರೀಯ ಏಕತಾ ದಿವಸ” ಆಚರಣೆಯು ಇಂದು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334 ರಲ್ಲಿ ನಡೆಯಿತು.
ಮುಖ್ಯಮಂತ್ರಿಗಳಾದ ಬಸವರಾಜ.ಬಿ.ಬೊಮ್ಮಾಯಿ ಅವರು “ಸರ್ದಾರ್ ವಲ್ಲಭಭಾಯಿ ಪಟೇಲ್” ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ “ರಾಷ್ಟ್ರೀಯ ಏಕತಾ ದಿವಸ”ದ ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾಶರ್ಮ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.