Home ಉಡುಪಿ ಕಾಪು ಸಮುದ್ರದ ಬಂಡೆಗಳ ಮಧ್ಯೆ ಟಗ್‌ ಬೋಟ್‌ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ ನೌಕಾ...

ಕಾಪು ಸಮುದ್ರದ ಬಂಡೆಗಳ ಮಧ್ಯೆ ಟಗ್‌ ಬೋಟ್‌ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ ನೌಕಾ ಪಡೆಯ

135
0

ಮಂಗಳೂರು:

ಕಾಪು ಸಮುದ್ರದ ಬಂಡೆಗಳ ಮಧ್ಯೆ ಟಗ್‌ ಬೋಟ್‌ನಲ್ಲಿ ಸಿಲುಕಿದ್ದು 9 ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್‌ ಎಸ್.ಬಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಸೋಮವಾರ ಮುಂಜಾನೆಯಿಂದ ನೌಕಾ ಪಡೆಯ ಹೆಲಿಕಾಪ್ಟರ್ ಕಾರ್ಯಾಚರಣೆ ಆರಂಭಿಸಿದ್ದು, ರಕ್ಷಣೆ ಮಾಡಿದ ಎಲ್ಲ 9 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು.

Naval helicopter rescues 9 people stranded in a tugboat near Udupi2

ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಕರಾವಳಿ ಕಾವಲು ಪಡೆ ಕಮಾಂಡರ್‌ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ, ಚರ್ಚಿಸಿದರು.

ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್‌ಹೌಸ್‌ನಿಂದ ಸುಮಾರು ಐದು ನಾಟಿಕಲ್ ಮೈಲಿ ದೂರದಲ್ಲಿ ಬಂಡೆಗಳ ನಡುವೆ ಟಗ್‌ ಸಿಲುಕಿಕೊಂಡಿತ್ತು.

Naval helicopter rescues 9 people stranded in a tugboat near Udupi1

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ: “ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ.”

LEAVE A REPLY

Please enter your comment!
Please enter your name here