Home ಬೆಂಗಳೂರು ನಗರ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಗಳಿಗೆ ಅಗತ್ಯ ಪ್ರೋತ್ಸಾಹ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಗಳಿಗೆ ಅಗತ್ಯ ಪ್ರೋತ್ಸಾಹ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

30
0
Necessary encouragement for hospital management courses — Karnataka Health Minister Dinesh Gundurao
Necessary encouragement for hospital management courses — Karnataka Health Minister Dinesh Gundurao

ಬೆಂಗಳೂರು:

ಖಾಸಗಿ ಹಾಗೂ ಸರ್ಕಾರಿ ವೈದ್ಯಕೀಯ ಕ್ಷೇತ್ರದಲ್ಲಿ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಇಂದಿನ ದಿನಗಳಲ್ಲಿ ಬಹು ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು IIMB ವತಿಯಿಂದ ಆಯೋಜಿಸಲಾಗಿದ್ದ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ವೈದ್ಯ ಸಮೂದಾಯಕ್ಕೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯ ಕೋರಿದ ಆರೋಗ್ಯ ಸಚಿವ ಗುಂಡೂರಾವ್ ಐಐಎಮ್ ಬೆಂಗಳೂರು ಮ್ಯಾನೇಜ್ ಮೆಂಟ್ ಕ್ಷೇತ್ರದಲ್ಲಿ ಉತ್ಕೃಷ್ಟ ತರಬೇತಿ ಹಾಗೂ ತರಗತಿಗಳನ್ನ ನಡೆಸುತ್ತಾ ಬಂದಿದೆ ಎಂದರು. ಸಂಸ್ಥೆಯ ಅಧ್ಯಕ್ಷರಾದ ಡಾ. ದೇವಿ ಶೆಟ್ಟಿಯವರ ಕಾರ್ಯದ ಬಗ್ಗೆ ಕಾರ್ಯಕ್ರಮದಲ್ಲಿ ಸಚಿವರು ಶ್ಲಾಘನೆ ವ್ಯಕ್ಯಪಡಿಸಿದರು.

ರಾಜ್ಯದಲ್ಲಿ ಉತ್ಕೃಷ್ಟ ಆರೋಗ್ಯ ನಿರ್ವಹಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ.‌ ಈ ನಿಟ್ಟಿನಲ್ಲಿ ಆರೋಗ್ಯ ಸಚಿವನಾಗಿ ನಾನು ಹೆಚ್ಚು ಉತ್ತೇಜನ ನೀಡುತ್ತೇನೆ. ಹಿರಿಯ ಸರ್ಕಾರಿ ಆರೋಗ್ಯ ವೃತ್ತಿಪರರು IIMB ಯ ಹಾಸ್ಪಿಟಲ್ ನಿರ್ವಹಣೆ ಕಾರ್ಯಕ್ರಮದಲ್ಲಿ ತರಬೇತಿ ಪಡೆಯುವಂತೆ ನಾನು ಸೂಚನೆ ನೀಡಲಿದ್ದೇನೆ. ಸಾರ್ವಜನಿಕ ಆರೋಗ್ಯ ಆಡಳಿತದಲ್ಲಿ ನಮ್ಮ ರಾಜ್ಯದ ಭವಿಷ್ಯವನ್ನು ರೂಪಿಸಲು IIM ನ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ತರಬೇತಿ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

LEAVE A REPLY

Please enter your comment!
Please enter your name here