Home ಶಿಕ್ಷಣ ಜೂನ್ 21 ರಿಂದ ಜುಲೈ 5 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ...

ಜೂನ್ 21 ರಿಂದ ಜುಲೈ 5 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

79
0

ಧಾರವಾಡ:

ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಈ ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ.24-ಗಣಿತ, ಜೂ. 28-ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

New dates for Karnataka SSLC exams announced in Karnataka 2
New dates for Karnataka SSLC exams announced in Karnataka 1

LEAVE A REPLY

Please enter your comment!
Please enter your name here