ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ನಿರ್ಮಾಣ ಕಾಮಗಾರಿ ಸುಮಾರು ₹340 ಕೋಟಿ ವೆಚ್ಚದಲ್ಲಿ ಅತ್ಯಂತ ಭರದಿಂದ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ, ನವೆಂಬರ್ 6ರಂದು ತಿಳಿಸಿದ್ದಾರೆ.
ನೂತನ ಟರ್ಮಿನಲ್ 15,950 ಚದರ ಮೀಟರ್ ವಿಸ್ತೀರ್ಣದ್ದಾಗಿದ್ದು, ಏಕಕಾಲಕ್ಕೆ 2,400 ಪ್ರಯಾಣಿಕರನ್ನು ನಿಭಾಯಿಸಬಲ್ಲದು ಎಂದು ಜೋಶಿ ಎಕ್ಸ್ನಲ್ಲಿ ಹೇಳಿದ್ದಾರೆ. ನಾಲ್ಕು ಏರೋಬ್ರಿಡ್ಜ್ಗಳು, 14 ಚೆಕ್-ಇನ್ ಕೌಂಟರ್ಗಳು ಹಾಗೂ ಸುಮಾರು 500 ಕಾರು, ಬಸ್ ಮತ್ತು ಟ್ಯಾಕ್ಸಿಗಳ ನಿಲುಗಡೆ ವ್ಯವಸ್ಥೆ ಇರಲಿದೆ.
ಹುಬ್ಬಳ್ಳಿ-ಧಾರವಾಡ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜಾಗತಿಕ ಸಂಪರ್ಕ ಹೆಚ್ಚಿಸುವ ಉದ್ದೇಶ ಈ ಟರ್ಮಿನಲ್ನದ್ದು ಎಂದು ಧಾರವಾಡ ಸಂಸದರಾದ ಜೋಶಿ ಹೇಳಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಸಾಂಸ್ಕೃತಿಕ ನಗರಿ ಧಾರವಾಡದ ಜನರ ದಶಕಗಳ ಕನಸಾದ ಅಂತರರಾಷ್ಟ್ರೀಯ ಗುಣಮಟ್ಟದ ಈ ವಿಮಾನ ನಿಲ್ದಾಣ ನನಸಾಗಲಿದೆ ಎಂದು ಅವರು ಹೇಳಿದ್ದಾರೆ.
