Home ವಿಜಯಪುರ ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!

ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!

57
0
newlywed commits suicide by making a video in Vijayapura
newlywed commits suicide by making a video in Vijayapura

ವಿಜಯಪುರ:

ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸೊಸೈಡ್) ಮಾಡಿಕೊಂಡಿರುವ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಉಪ್ಪಲದಿನ್ನಿಯ ಸುಹಾನ್ ಸೋನಾರ್ (21 ವರ್ಷ) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ನನ್ನೊಂದಿಗಿರುವ ಫೋಟೋ ನಿನ್ನ ಪತಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಕಳೆದ ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ, ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮೂವರಿಂದ ಕಿರುಕುಳ
ಇನ್ನು ಗ್ರಾಮದ ಯುನೀಸ್ ಪಾರ್ಥನಳ್ಳಿ ಹಾಗೂ ದಸ್ತಗಿರಸಾಬ್ ಮುಳವಾಡರ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ದ್ವೇಷ ಹೊಂದಿದ್ದ. ದಸ್ತಗಿರಸಾಬ್ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟು ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮೂವರು ಸೇರಿ ಸುಹಾನಾ ಬೆನ್ನು ಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಂಡನನ್ನು ಬಿಟ್ಟು ಬಾ ಎನ್ನುತ್ತಿದ್ದ ಆರೋಪಿಗಳು
ಗಂಡನನ್ನು ಬಿಟ್ಟು ಬಾ, ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಅಲ್ತಾಪ್ ಹಾಗೂ ಯುನೀಸ್‌ನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here