ಬೆಂಗಳೂರು:
ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಲ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಭಯೋತ್ಪಾದನೆ ನಿಗ್ರಹ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ತಿಳಿಸಿದೆ.
ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್ ಕಳುಹಿಸಿದ್ದ ಫೇಸ್ ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಗಲಭೆಗಳು ನಡೆದಿದ್ದವು.
NIA Arrests 17 accused persons in Bengaluru Riots Case. pic.twitter.com/HxG0N7pKOJ
— NIA India (@NIA_India) December 21, 2020
ಈ ಪ್ರಕರಣ ಮೂಲತಃ ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ, ಸೆ 21 ರಂದು ಎನ್‍ಐಎ ಈ ಪ್ರಕರಣವನ್ನು ವಹಿಸಿಕೊಂಡು ತನಿಖೆ ಆರಂಭಿಸಿತ್ತು. UNI