ಬೆಂಗಳೂರು:
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಬ್ರೇಜ್ (35) ಬಂಧಿತ ಆರೋಪಿ.
NIA arrests an absconding accused in DJ Halli Police Station Rioting case pic.twitter.com/fbYUTysahI
— NIA India (@NIA_India) September 21, 2021
ಬಂಧಿತ ವಾಟ್ಸಾಪ್ ಗ್ರೂಪ್ಗಳ ಮೂಲಕ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದ. ಗಲಭೆ ವೇಳೆ ಪೊಲೀಸ್ ವಾಹನ ಸೇರಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈತನ ಹೆಸರು ಪ್ರಕರಣದ ಚಾರ್ಜ್‌ಶೀಟ್‌ನಲ್ಲೂ ನಮೂದಾಗಿತ್ತು. ಪ್ರಕರಣದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದನು. ಸೆ. 20ರಂದು ತನಿಖಾಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
Also Read: NIA arrests absconding accused in Bengaluru riots of August last year