ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನ NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್ ರನ್ನು ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ.
ಆರೋಪಿಗಳನ್ನು ಮಡಿವಾಳದ ಎಫ್ ಎಸ್ ಎಲ್ ಸೆಂಟರ್ ಬಳಿಯ ಇಂಟ್ರಾಗೇಷನ್ ಸೆಲ್ ನಲ್ಲಿರಿಸಿ ವಿಚಾರಣೆ ಮಾಡಲಾಗುತ್ತಿದೆ.
ರಾತ್ರಿ ಇಂಟ್ರಾಗೇಷನ್ ಸೆಲ್ ನಲ್ಲೇ ಶಂಕಿತರು ಇದ್ದು, ಬೆಳಗ್ಗೆ ನ್ಯಾಯಾಧೀಶರ ಮುಂದೆ ಹಾಜರಿಪಡಿಸುವ ಸಾಧ್ಯತೆ ಇದೆ. ಬೆಳಗ್ಗೆ 10:30 ಕ್ಕೆ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.