Home ಅಪರಾಧ ಕರ್ನಾಟಕ ಸೇರಿ ದೇಶದ 4 ರಾಜ್ಯಗಳ ಹಲವೆಡೆ NIA ದಾಳಿ

ಕರ್ನಾಟಕ ಸೇರಿ ದೇಶದ 4 ರಾಜ್ಯಗಳ ಹಲವೆಡೆ NIA ದಾಳಿ

12
0

ಬೆಂಗಳೂರು: NIA ಅಧಿಕಾರಿಗಳು ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಈ ಪೈಕಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯೆಬ್‌ ಅಬ್ದುಲ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ

ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ವಾಸವಿದ್ದ ಶೋಯೆಬ್‌ ಅಬ್ದುಲ್ ಮಿರ್ಜಾನನ್ನು ವಶಕ್ಕೆ ಪಡೆದಿದ್ದು, ಈತ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here