ಬೆಂಗಳೂರು: ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ತಡರಾತ್ರಿ 12 ಗಂಟೆಯಲ್ಲಿ ಈ ಘಟನೆ ನಡೆದಿದೆ.
ಡ್ರಗ್ ಪೆಡ್ಲರ್ ಇರುವಿಕೆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿತ್ತು. ಈ ಸಂಬಂಧ ಪರಿಶೀಲನೆಗೆ ತೆರಳಿದಾಗ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಆರೋಪಿಗಳು ಕಾರಿನ ಗಾಜು ಒಡೆದಿ ಹಾಕಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.