Home ರಾಜಕೀಯ ಚನ್ನಪಟ್ಟಣದಿಂದ ಎನ್‌ಡಿಎ ಮೈತ್ರಿಕೂಟದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ

ಚನ್ನಪಟ್ಟಣದಿಂದ ಎನ್‌ಡಿಎ ಮೈತ್ರಿಕೂಟದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ

12
0

ಬೆಂಗಳೂರು : ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಎನ್‌ಡಿಎ ಮೈತ್ರಿಕೂಟದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರು ಷೋಷಣೆಯಾಗಿದೆ. ಆ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿಯೋಗೇಶ್ವರ್‌ಗೆ ನಿಖಿಲ್‌ ಕುಮಾರಸ್ವಾಮಿ ಎದುರಾಳಿಯಾಗಿದ್ದಾರೆ.

ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಘೋಷಿಸಿದ್ದು, ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ಜೆಡಿಎಸ್‌ಗೆ ಚನ್ನಪಟ್ಟಣವನ್ನು ಬಿಟ್ಟುಕೊಟ್ಟಿತ್ತು.

ಬಿ.ಎಸ್.​ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

LEAVE A REPLY

Please enter your comment!
Please enter your name here