
Nikhil Kumaraswamy decides to stay away from politics
ಬೀದರ್:
ನಾನು ಒಂದು ವಾರದಿಂದ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನನಾಗಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ. ಆದರೆ, ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಗ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಸಿನಿಮಾ ಶೂಟಿಂಗ್ ಆರಂಭವಾಗಿದೆ. ನಾನು ಸದ್ಯ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದೇನೆ. ಮುಂದೇ ಚುನಾವಣಾ ರಾಜಕೀಯ ಎಲ್ಲಿಗೆ ಕರೆದುಕೊಂಡು ಹೋಗುತ್ತೆ ಕಾದು ನೋಡೋಣಾ, ನಮಗೆ ಯಾವುದೇ ರೀತಿಯ ಹತಾಶ ಭಾವನೆ ಇಲ್ಲ ಎಂದು ಹೇಳಿದರು.
ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲೆಲ್ಲಿ ಸ್ಪರ್ಧಿಸಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಜತೆಗಿನ ಮೈತ್ರಿ ಕುರಿತು ಜೆಡಿಎಸ್ ಹಿರಿಯರಾದ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ತೆರೆ ಎಳೆಯುತ್ತಾರೆ ಎಂದರು.
ಒಂದು ಪ್ರಾದೇಶಿಕ ಪಕ್ಷ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಕಷ್ಟದ ಕೆಲಸ. ದೇವಗೌಡರ ಶ್ರಮ, ಉತ್ಸಾಹಿ ಕಾರ್ಯಕರ್ತರಿಂದ ಪಕ್ಷ ನಡೆಯುತ್ತಿದೆ. ಕುಮಾರಸ್ವಾಮಿ ಅವರು ಯಶಸ್ವಿಯಾಗಿ ಪಕ್ಷ ನಡೆಸಿಕೊಂಡು ಹೋಗುತ್ತಿದ್ದಾರೆ. ಅನೇಕ ಹಿರಿಯ ನಾಯಕರ ಕೊಡುಗೆ ಪಕ್ಷಕ್ಕಿದೆ. ನಾನು ಒಂದು ವಾರದಿಂದ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನನಾಗಿದ್ದೇನೆ ಎಂದು ಹೇಳಿದರು.