
No Bandh Called on June 22 Against Power Rate Hike - FKCCI President Clarifies
ಬೆಂಗಳೂರು:
ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ. ವಿ. ಗೋಪಾಲರೆಡ್ಡಿ ಸ್ಪಷ್ಪಪಡಿಸಿದ್ದಾರೆ.
ವಿದ್ಯುತ್ ದರ ಇಳಿಕೆ ಮಾಡುವಂತೆ ಒತ್ತಾಯಿಸಿ ಎಫ್ ಕೆಸಿಸಿಐ ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು. ಆದರೆ, ಈಗ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು ಎಫ್ ಕೆಸಿಸಿಐ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ, ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9 ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು.