ಬೆಂಗಳೂರು:
ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರು, ರಾಜ್ಯದಲ್ಲಿ ಕೊರೋನಾ 2ನೇ ಅಲೆ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿ ಹೋಗದಂತೆ ಕ್ರಮ ಕೈಗೊಳ್ಳು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ಯಾವುದೆ ರಾಜಿ ಇಲ್ಲ. ಇದು ಏಕಾಏಕಿ ಮಾಡಿದ ನಿಯಮ ಅಲ್ಲ ಎಂದರು.
ಇದನ್ನೂ ಓದಿ: Covid-19: ಬೆಂಗಳೂರುನಲ್ಲಿ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್: ಹೊಸ ಮಾರ್ಗಸೂಚಿ ಪ್ರಕಟ https://kannada.thebengalurulive.com/covid-19-karnataka-orders-closure-of-gym-swimming-pools-in-apartments-in-bengaluru/
ಇನ್ನೆರಡು ತಿಂಗಳು ಕೊರೋನಾ ಆರ್ಭಟ ಇರಲಿದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಇದರಿಂದಾಗಿ ಪರಿಸ್ಥಿತಿ ಕೈ ಮೀರಬಾರದೆಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಳೆದು ತೂಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದರು.
ಇಂದೇ ಸಂದರ್ಭದಲ್ಲಿ ಮಕ್ಕಳಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಥಿಯೇಟರ್ ನಿಯಮ ಬದಲಾವಣೆ ಪ್ರಶ್ನೆಯೇ ಇಲ್ಲ. 8 ಜಿಲ್ಲೆಗಳ ಥಿಯೇಟರ್ ಗಳಲ್ಲಿ ಶೇ.50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ಈಗ ಮಾಡಿರುವ ನಿಯಮ ತಾತ್ಕಾಲಿಕ ಮಾತ್ರವಾಗಿದೆ. ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ರಾಜಿ ಇಲ್ಲ.ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.
ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ ಧಾರ್ಮಿಕ ಕ್ಷೇತ್ರಗಳಲ್ಲೂ ಕಠಿಣ ಕ್ರಮಕೈಗೊಳ್ಳಲಾಗಿದೆ ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಎಂದೂ ಸಚಿವರು ಹೇಳಿದರು.