Home ರಾಜಕೀಯ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ

ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ

45
0
Karnataka CM decision Will have new cabinet in next 48-72 hours Randeep Surjewala
Karnataka CM decision Will have new cabinet in next 48-72 hours Randeep Surjewala

ಬೆಂಗಳೂರು:

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ಹೇಳಿದರು.

ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.

LEAVE A REPLY

Please enter your comment!
Please enter your name here