Home ಕರ್ನಾಟಕ ಕೊರೊನಾ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು; ಮುಖ್ಯಮಂತ್ರಿ ಯಡಿಯೂರಪ್ಪ

ಕೊರೊನಾ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು; ಮುಖ್ಯಮಂತ್ರಿ ಯಡಿಯೂರಪ್ಪ

30
0

ಬೆಂಗಳೂರು:

ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಾರ್ವಜನಿಕ ಬಂಧುಗಳೇ, ಕೊರೋನಾ ಅಪಾಯ ಇನ್ನೂ ತಗ್ಗಿಲ್ಲ. ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಸಾಂಕ್ರಾಮಿಕದ ಬಗ್ಗೆ ಕಿಂಚಿತ್ತೂ ನಿರ್ಲಕ್ಷ್ಯ ಸಲ್ಲದು. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 7ಕ್ಕೆ ಏರಿದೆ. ಬ್ರಿಟನ್ ನಿಂದ ಬಂದ 15 ಸೋಂಕಿತರ ಪ್ರಯೋಗಾಲಯ ಮಾದರಿಯನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆ ನಡೆಸಿ 7 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಮನವಿ ಮಾಡಿದ್ದಾರೆ. UNI

LEAVE A REPLY

Please enter your comment!
Please enter your name here