ಬೆಂಗಳೂರು: ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು ಎಂದು ಕೆಎಂಎಫ್ ಸ್ಪಷ್ಟಪಡಿಸಿದೆ. ದರ ಪರಿಷ್ಕರಣೆ ಪ್ರಸ್ತಾವ ಇಲ್ಲ. ಅಂಥ ವದಂತಿಗಳನ್ನು ನಂಬಬಾರದು ಎಂದು ಸಾರ್ವಜನಿಕರಲ್ಲಿ ಕೆಎಂಎಫ್ ಪ್ರಕಟಣೆ ಹೊರಡಿಸಿದೆ.
ಮೊಸರು, ಮಜ್ಜಿಗೆ ಅಥವಾ ಲಸ್ಸಿಯ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ವಿನಾ ಕಾರಣ ಸಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡಲಾಗುತ್ತಿದೆ. ಅಂಥ ವದಂತಿಗಳು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಕೆಎಂಎಫ್ ಮಾರುಕಟ್ಟೆ ಅಧಿಕಾರಿ ರಘುನಂದನ್ ತಿಳಿಸಿದ್ದಾರೆ.
ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿರುವ ಕೆಎಂಎಫ್ ಸದ್ಯದಲ್ಲೇ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದೆ. ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ದರ ಏರಿಕೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಲಾಗಿತ್ತು.