ಬೆಂಗಳೂರು: ಕರ್ನಾಟಕದಲ್ಲಿ ಆಸ್ತಿಗಳ ಮಾರ್ಗಸೂಚಿ ದರ ಏರಿಕೆ ಪ್ರಸ್ತಾಪ ಇನ್ನೂ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತಿಳಿಸಿದ್ದಾರೆ.
ಮಾರ್ಗಸೂಚಿ ದರ ಏರಿಕೆ ಪ್ರಸ್ತಾಪದ ಬಗ್ಗೆ ಕೇಳಿದಾಗ ಶಿವಕುಮಾರ್, “ಮಾರ್ಗಸೂಚಿ ದರ ಪರಿಷ್ಕರಣೆ ಬಗ್ಗೆ ಇದುವರೆಗೆ ನನ್ನ ಗಮನಕ್ಕೆ ಬಂದಿಲ್ಲ. ಇಲಾಖಾ ಮಟ್ಟದಲ್ಲಿ ಚರ್ಚೆ ನಡೆಯುತ್ತಿರಬಹುದು. ಕಡತ ನನ್ನ ಬಳಿ ಬಂದಾಗ ಪರಿಶೀಲಿಸುತ್ತೇವೆ” ಎಂದರು.
