Home ಆರೋಗ್ಯ ರಾಜ್ಯದಲ್ಲಿ ನೈಟ್ ಕರ್ಪ್ಯೂ, ಲಾಕ್‌ಡೌನ್ ಇಲ್ಲ: ಯಡಿಯೂರಪ್ಪ

ರಾಜ್ಯದಲ್ಲಿ ನೈಟ್ ಕರ್ಪ್ಯೂ, ಲಾಕ್‌ಡೌನ್ ಇಲ್ಲ: ಯಡಿಯೂರಪ್ಪ

115
0

ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರ

ಬೆಂಗಳೂರು:

ರಾಜ್ಯದಲ್ಲಿ ಸೀಲ್‌ಡೌನ್ , ನೈಟ್ ಕರ್ಪ್ಯೂ ಹಾಗೂ ಲಾಕ್‌ಡೌನ್‌ ಹೇರುವುದಿಲ್ಲ ಎಂಬುವುದನ್ನು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಗಣನೀಯವಾಗಿ ಏರುತ್ತಿರುವ ಹಿನ್ನೆಲೆ ಇಂದು , ಬುಧವಾರ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ಎಲ್ಲಾ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಹಾಗೂ ಕೊರೋನಾ ಎರಡನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಸಭೆ ಬಳಿಕ ಸಿಎಂ ಬಿ . ಎಸ್ . ಯುಡಿಯೂರಪ್ಪ ಸಭೆಯಲ್ಲಿ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳ ಕುರಿತು ಮಾಹಿತಿ ನೀಡಿದ್ದಾರೆ .

CM with PM1

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಸೀಲ್‌ಡೌನ್ , ನೈಟ್ ಕರ್ಪ್ಯೂ ಹಾಗೂ ಲಾಕ್‌ಡೌನ್‌ ಹೇರುವುದಿಲ್ಲ ಎಂಬುವುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಕೇಂದ್ರ ಮುಖ್ಯವಾಗಿ ಪಾಲಿಸುವಂತೆ ತಿಳಿಸಿದ ಮೂರು ಪ್ರಮುಖ ಸಲಹೆಗಳ ಬಗ್ಗೆಯೂ ತಿಳಿಸಿದ್ದಾರೆ.

ಇನ್ನು ಸಭೆಯಲ್ಲಿ ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಅಂತರ , ಇನ್ ಡೋರ್ ಕಾರ್ಯಕ್ರಮಗಳ ಬಗ್ಗೆ ಎಚ್ಚರ ಹಾಗೂ ಸಿನಿಮಾ ಹಾಲ್ ಗಳಲ್ಲಿ ಈಗಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ತಿಳಿಸಿರುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ಅಲ್ಲದೇ ಕರ್ನಾಟಕದ ಬೆಂಗಳೂರು , ಬೀದರ್ ಹಾಗೂ ಕಲಬುರ್ಗಿ ಈ ಮೂರು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಹೆಚ್ಚಿನ ನಿಗಾ ವಹಿಸುವಂತೆಯೂ ಕೇಂದ್ರ ತಿಳಿಸಿದೆ ಎಂದಿದ್ದಾರೆ.

ನೈಟ್ ಕರ್ಪ್ಯೂ , ಸೀಲ್‌ಡೌನ್ ಇಲ್ಲ ಇನ್ನು ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅಡ್ಡಿ ಇಲ್ಲ . ನೈಟ್ ಕರ್ಪ್ಯೂ , ಸೀಲ್‌ಡೌನ್ ಇಲ್ಲ ಎಂದಿರುವ ಸಿಎಂ ಯಡಿಯೂರಪ್ಪ ಕಳೆದ ಹತ್ತು ದಿನಗಳಲ್ಲಿ ಕೊರೋನಾ ಏರಿಕೆಯಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತಿದ್ದು , ಜನ ಸೇರುವ ಕಡೆ ಮುನ್ನೆಚ್ಚರಿಕೆಗೆ ಸೂಚನೆ ನೀಡುತ್ತೇವೆ . ಅಲ್ಲದೇ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here