Home ಕರ್ನಾಟಕ ಪೆಟ್ರೋಲ್ ತೆರಿಗೆ ಕಡಿತ ಇಲ್ಲ, ಹೊಸ ತೆರಿಗೆವೂ ಇಲ್ಲ

ಪೆಟ್ರೋಲ್ ತೆರಿಗೆ ಕಡಿತ ಇಲ್ಲ, ಹೊಸ ತೆರಿಗೆವೂ ಇಲ್ಲ

51
0

ಬೆಂಗಳೂರು: 

ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸಲಾಗಿಲ್ಲ ಎಂದು ಘೋಷಿಸಿದ್ದಾರೆ.

ಬಜೆಟ್ ಮಂಡನೆ ಆರಂಭಿಸಿದ ಯಡಿಯೂರಪ್ಪ, ಕಾಂಗ್ರೆಸ್ ಪ್ರತಿಭಟನೆರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ಇದೆ. ಇದನ್ನು ಹೊರತುಪಡಿಸಿ 2021–22ನೇ ಸಾಲಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸಲಾಗಿಲ್ಲ. ಹೀಗಾಗಿ  ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

ಬಜೆಟ್‌ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಯಡಿಯೂರಪ್ಪ ಅವರು, ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಅದೇ ರೀತಿ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಎಂದು ತಿಳಿಸಿದರು.

LEAVE A REPLY

Please enter your comment!
Please enter your name here