Home ಶಿಕ್ಷಣ ಪಠ್ಯ ಕ್ರಮ ಕಡಿಮೆ ಮಾಡುವುದಿಲ್ಲ- ಬಿ.ಸಿ. ನಾಗೇಶ್

ಪಠ್ಯ ಕ್ರಮ ಕಡಿಮೆ ಮಾಡುವುದಿಲ್ಲ- ಬಿ.ಸಿ. ನಾಗೇಶ್

16
0
No Plans to cut curriculum: Karnataka Education Minister
bengaluru

ಬೆಂಗಳೂರು:

ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ಪ್ರಾಥಮಿಕ ಶಾಲೆ ಆರಂಭದ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಪಠ್ಯ ಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಶನಿವಾರ ಪೂರ್ಣದಿನ ಹಾಗೂ ಭಾನುವಾರ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ. ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡುವ ಬಗ್ಗೆ ಜನವರಿ-ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

bengaluru
bengaluru

LEAVE A REPLY

Please enter your comment!
Please enter your name here